Friday, September 18, 2026
spot_imgspot_img
spot_imgspot_img

ಕಾಣಿಯೂರು: ಬೈತಡ್ಕ ಹೊಳೆಗೆ ಕಾರು ಬಿದ್ದು, ವಿಟ್ಲದ ಯುವಕ ಧನುಷ್ ನಾಪತ್ತೆ ಪ್ರಕರಣ; ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

- Advertisement -
- Advertisement -

ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ವಿಟ್ಲದ ನಿವಾಸಿ ಧನುಷ್ ಎಂಬವರಿಗೆ ಸೇರಿದ ಕಾರು ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ ಧನುಷ್ ನಾಪತ್ತೆಯಾಗಿದ್ದು ಮೊಬೈಲ್ ಸಹ ಸ್ವಿಚ್ ಆಫ್ ಆಗಿದೆ. ಇದರಿಂದ ಕುಟುಂಬಸ್ಥರಲ್ಲಿ ಆತಂಕ ಇಮ್ಮಡಿಯಾಗಿದೆ. ಕಾರಿನಲ್ಲಿ ಒಟ್ಟು 3 ಮಂದಿ ಪ್ರಯಾಣಿಸುತ್ತಿದ್ದರು. ಅವರು ಸಹ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ.

ವಿಟ್ಲ ನಿವಾಸಿ ಧನುಷ್‌ ತಂದೆ ಚೋಮ ನಾಯ್ಕ್ ರವರು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನೆನ್ನೆ ರಾತ್ರಿ ಮನೆಯಿಂದ ತನ್ನ 800 ಕಾರಿನಲ್ಲಿ ಕನ್ಯಾನದ ಧನು ಎಂಬವರೊಂದಿಗೆ ಕಡಂಬು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು, ಬಳಿಕ ಮಗನ ಮೊಬೈಲ್ ಕೂಡಾ ಸ್ವಿಚ್‌ ಆಫ್‌ ಆಗಿದ್ದು, ಇಲ್ಲಿವರೆಗೂ ಮನೆಗೆ ಬಂದಿಲ್ಲ ಧನುಷನ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿದಾಗ ಆತನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ದುರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 115/2022 ರ ಅನ್ವಯ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!