- Advertisement -
- Advertisement -
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ 6 ತಿಂಗಳ ಮಗು ಸಹಿತ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ , ಪೌಜಿಯಾ, ಸೌದ ಮತ್ತು 6 ತಿಂಗಳು ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಂಬಂಧಿಕರೊರ್ವರು ಹುಷಾರಿಲ್ಲದ ಕಾರಣಕ್ಕಾಗಿ ದಾಖಲಾಗಿದ್ದು ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುವ ವೇಳೆ ಈ ಘಟನೆ ನಡೆದಿದೆ.
- Advertisement -