Thursday, August 6, 2026
spot_imgspot_img
spot_imgspot_img

ಕಡಬ: ಬೆಳ್ಳಂಬೆಳಗ್ಗೆ ಖಾಸಗಿ ಬಸ್‌ ಮತ್ತು ಕಾರು ಡಿಕ್ಕಿ; ಓರ್ವನಿಗೆ ಗಾಯ

- Advertisement -
- Advertisement -

ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಬೆಳಗ್ಗೆ ನಡೆದಿದೆ.

ಧರ್ಮಸ್ಥಳ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕ ಲೋಲಕ್ಷ ಎಂಬವರಿಗೆ ಗಾಯವಾಗಿದ್ದು, ಕಡಬ ಸಮುದಾಯ ಆಸ್ಪತ್ರೆ ಗೆ ಸೇರಿಸಲಾಗಿದೆ. ಉಳಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಶಿರಾಡಿ ಘಾಟಿಯಲ್ಲಿ ರಸ್ತೆ ಸಂಚಾರ ತಡೆ ಹಿನ್ನೆಲೆಯಲ್ಲಿ ಕಿರಿದಾದ ದಾರಿಯಲ್ಲಿ ಸಂಚರಿಸುತ್ತಿರುವ ಘನ ವಾಹನಗಳು ತಿರುವುಗಳ ಅರಿವು ಇಲ್ಲದೇ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!