Sunday, June 29, 2025
spot_imgspot_img
spot_imgspot_img

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಆರ್ಮಿ ಆರ್ ಆರ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ.

ಅನಾರೋಗ್ಯ ಹಿನ್ನಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಪರೀಕ್ಷೆ ಮಾಡಿದಾಗ ವರದಿ ಪಾಸಿಟಿವ್ ಬಂದಿತ್ತು. ನಂತರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದರೂ ಕೂಡ ಅವರು ಕೋಮಾಗೆ ಜಾರಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!