Tuesday, June 16, 2026
spot_imgspot_img
spot_imgspot_img

ರಾಜ್ಯದಲ್ಲಿ ಇಂದು 6495 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 270 , ಉಡುಪಿ 83 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 113 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6495 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 113 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 342423 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 249467 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1862 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 27 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2422 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 37116 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 270 ಮಂದಿಗೆ ಸೋಂಕು ತಗುಲಿದೆ. 12 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 367 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12713 ಆಗಿದ್ದು, ಇಲ್ಲಿಯವರೆಗೆ 9789 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2556 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 368 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 83 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 11598 ಆಗಿದ್ದು ,ಇಲ್ಲಿಯವರೆಗೆ 8979 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2523 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!