Sunday, August 9, 2026
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9860 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 414, ಉಡುಪಿ 169 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 113 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9860 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 113 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 361341 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 260913 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3420 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 32 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2383 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 39911 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 414 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 346 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 13479 ಆಗಿದ್ದು, ಇಲ್ಲಿಯವರೆಗೆ 10498 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2600 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 381 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 169 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 11928 ಆಗಿದ್ದು ,ಇಲ್ಲಿಯವರೆಗೆ 9469 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2358 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!