Tuesday, September 15, 2026
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಆರೋಪಿಗಳಿಗೆ ಆ.24 ರವರೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಹಂತಕರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸುಳ್ಯ ಕೋರ್ಟ್‌ ಗೆ ಪೊಲೀಸರು ಹಾಜರುಪಡಿಸಿದ್ದಾರೆ.

ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್, ರಿಯಾಝ್ ಅಂಕತಡ್ಕ, ಬಶೀರ್ ಎಲಿಮಲೆಗೆ ನ್ಯಾಯಾಂಗ ಬಂಧನದಲ್ಲಿದ್ದರು. ಇದೀಗ ಸುಳ್ಯ ಕೋರ್ಟ್ ಆರೋಪಿಗಳನ್ನು ಆ.24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಆರೋಪಿಗಳನ್ನು ವಶಕ್ಕೆ ಪಡೆಯುವುದಕ್ಕೆ ಎನ್.ಐ.ಎ ಅಧಿಕಾರಿಗಳಿಂದಲೂ ಸಿದ್ಧತೆ ನಡೆಸಿದ್ದು ಕೋರ್ಟ್‌ ಗೆ ಅರ್ಜಿ ಸಲ್ಲಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

- Advertisement -

Related news

error: Content is protected !!