- Advertisement -
- Advertisement -
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಆಪ್ತ ಎನ್ನಲಾಗಿರುವ ರವಿಶಂಕರ್ ಎಂಬಾತನನ್ನು ಸಿಸಿಬಿ ತಂಡ ಬಂಧಿಸಿದೆ.
ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿ ರವಿಶಂಕರ್ ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಲು ವಶಕ್ಕೆ ಪಡೆದುಕೊಂಡಿದ್ದರು. ಆದ್ರೆ ವಿಚಾರಣೆ ನಡೆಸಿದ ಸಿಸಿಬಿ ಟೀಂ ಇಂದು ಅರೆಸ್ಟ್ ಮಾಡಿದೆ.
ನಾಳೆ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟಿಸ್:
ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ನಿನ್ನೆಯೇ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಆದರೆ ಅನಾರೋಗ್ಯ ಹಿನ್ನಲೆಯಲ್ಲಿ ನಟಿ ರಾಗಿಣಿ ಇಂದು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲೇಬೇಕು ಎಂದು ಸಿಸಿಬಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.
- Advertisement -