Monday, September 21, 2026
spot_imgspot_img
spot_imgspot_img

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಕೇಪು ವಲಯದ ಮಾಣಿಲ ಒಕ್ಕೂಟದ ಚೈತನ್ಯ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ ಮುರುವ ಶಾಲೆಯಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಜಯಂತಿ ವಹಿಸಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ದಯಾನಂದ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯಾದ ಬೇಬಿ ಯವರು ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ನಳಿನಾಕ್ಷಿ ಶೆಟ್ಟಿ ಮಾತಾನಾಡಿ ಕೆಲಸದ ಒತ್ತಡದ ನಡುವೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯ ಬಗ್ಗೆ ಮನವರಿಕೆ ಮಾಡಿದರು.

ವಲಯ ಮೇಲ್ವಿಚಾರಕಿಯಾದ ವಿನೋದ ರವರು ಸಂಘದ ಕಾರ್ಯವೈಖರಿ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪುರುಷೋತ್ತಮ, ಸಂಯೋಜಕಿ ಚಂದ್ರಾವತಿ ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!