Tuesday, July 1, 2025
spot_imgspot_img
spot_imgspot_img

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಬಂಟ್ವಾಳ ಇದರ ಆಶ್ರಯದಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸಪ್ಟೆಂಬರ್ 3 ರಂದು ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ತಂಡ ಅಭಿನಯಿಸಿದ “ಲಸಿಕಾಮೃತ” ವಿಜ್ಞಾನ ನಾಟಕ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆಯವರ ಪರಿಕಲ್ಪನೆಯ, ಪತ್ರಕರ್ತ, ರಂಗಕರ್ಮಿ ಮೌನೇಶ್ ವಿಶ್ವಕರ್ಮ ನಿರ್ದೇಶನದ ಈ ನಾಟಕದಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಸ್ವಸ್ತಿ, ಅನಿಷಾ ಆರ್, ಸುಜನ ಡಿ ಕಾಮತ್, ಸಿಂಚನ ಶ್ರೀ, ಶಾಶ್ವತ್ ರಾವ್, ಆಶ್ರಯ, ಸಂಜಿತ್ ಹಾಗೂ ಬಿಂದಿಯಾ ಭಾಗವಹಿಸಿದ್ದರು. ತಾಲೂಕು ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ‌ ಸ್ಪರ್ಧೆಯಲ್ಲಿ 9ನೇ ತರಗತಿಯ ಪ್ರಕೃತಿ ಶೆಟ್ಟಿ ತೃತೀಯ ಸ್ಥಾನ ಪಡೆದಿರುತ್ತಾರೆ. ವಿಜೇತರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!