Friday, July 24, 2026
spot_imgspot_img
spot_imgspot_img

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಮನೆಗೆ ಬೆಂಕಿ; ಮನೆಯೊಳಗೆ ಮಲಗಿದ್ದ ವ್ಯಕ್ತಿ ಸಜೀವ ದಹನ

- Advertisement -
- Advertisement -

ಬೆಳ್ಳಾರೆ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿಯೋರ್ವರು ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ.

ಇಂದು ಬೆಳಿಗ್ಗೆ ಸುಧಾಕರ್ ಎಂಬವರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಆವರಿಸಿತ್ತು.

ಸುಧಾಕರ್ ಅವರಿಗೆ ಸ್ವಲ್ಪ ಅನಾರೋಗ್ಯವಾಗಿದ್ದ ಹಿನ್ನಲೆಯಲ್ಲಿ ಅವರಿಗೆ ಹೊರಗೆ ಓಡಲು ಸಾಧ್ಯವಾಗಲಿಲ್ಲ. ಸ್ಥಳದಲ್ಲಿಯೇ ಬೆಂಕಿಯಲ್ಲಿ ದಹಿಸಲ್ಪಟ್ಟು ಸಾವನ್ನಪ್ಪಿದರೆಂದು ತಿಳಿದು ಬಂದಿದೆ. ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿ ಶಾಮಕದಳದವರು ಸ್ಥಳಕ್ಕೆ ಧಾವಿಸಿದ್ದಾರೆ.

- Advertisement -

Related news

error: Content is protected !!