Saturday, June 28, 2025
spot_imgspot_img
spot_imgspot_img

BIG BLAST:-ರಾಜ್ಯದಲ್ಲಿ ಇಂದು 9746 ಮಂದಿಗೆ ಕೊರೊನಾ ಸೋಂಕು..!ದಕ್ಷಿಣ ಕನ್ನಡದಲ್ಲಿ 377, ಉಡುಪಿ 175 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 128 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9746 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 128 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 389232 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿಈವರೆಗೆ 283298 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3093 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 34 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3226 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41479 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 377 ಮಂದಿಗೆ ಸೋಂಕು ತಗುಲಿದೆ. 9 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 311 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14600 ಆಗಿದ್ದು, ಇಲ್ಲಿಯವರೆಗೆ 11239 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2961 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 400 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 175 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 12518 ಆಗಿದ್ದು ,ಇಲ್ಲಿಯವರೆಗೆ 10361 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2046 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!