- Advertisement -
- Advertisement -
ಮಲ್ಪೆ: ಕೊಡವೂರು ಗ್ರಾಮದ ಕಾನಂಗಿ ಬಳಿ ಮಹಿಳೆಯೊರ್ವಳು ನೇಣಿಗೆ ಶರಣಾದ ಘಟನೆ ಸೆ.13ರ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕಾನಂಗಿ ನಿವಾಸಿ 34 ವರ್ಷದ ಬೀನಾ ಎಂದು ಗುರುತಿಸಲಾಗಿದೆ.

ಬೀನಾ ಅವರು ನಾಲ್ಕು ವರ್ಷಗಳ ಹಿಂದೆ ನಿತ್ಯಾನಂದ ಎಂಬಾತನನ್ನು ಮದುವೆಯಾಗಿದ್ದರು. ಆದರೆ ಪತಿ ನಿತ್ಯಾನಂದ್ ಆರ್ಥಿಕ ಮುಗ್ಗಟ್ಟಿನ ಹಿನ್ನಲೆಯಲ್ಲಿ 9 ತಿಂಗಳ ಹಿಂದೆ ಆತ್ಮಹತ್ಯೆ ಶರಣಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಪತಿ ಅಗಲಿಕೆಯ ಹಿನ್ನಲೆಯಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಬೀನಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -








