Sunday, September 13, 2026
spot_imgspot_img
spot_imgspot_img

ಕಟೀಲು: ಸೆ.26ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು; ಎನ್. ಶಶಿಕುಮಾರ್‍

- Advertisement -
- Advertisement -

ಕಟೀಲು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಸೆಪ್ಟಂಬರ್ 26ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 5ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಪೊಲೀಸ್ ಆಯುಕ್ತರೂ ಆಗಿರುವ ಅಪರ ದಂಡಾಧಿಕಾರಿ ಎನ್. ಶಶಿಕುಮಾರ್‍ ಆದೇಶಿಸಿದ್ದಾರೆ.

ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳು 1989ರ ನಿಯಮ 217ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ.

ಬದಲಿ ವ್ಯವಸ್ಥೆ ವಿವರ
ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು. ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು. ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.

ರಥಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

- Advertisement -

Related news

error: Content is protected !!