Friday, July 24, 2026
spot_imgspot_img
spot_imgspot_img

ಕಾಸರಗೋಡು: 15 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಶಾಲಾ ಬಸ್

- Advertisement -
- Advertisement -

ಕಾಸರಗೋಡು: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ 15 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ.

ಅಪಘಾತದಲ್ಲಿ ಚಾಲಕ ಹಾಗೂ ಕೆಲ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆದಿರದ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರಿಸರವಾಸಿಗಳು, ಪೊಲೀಸರು ವಿದ್ಯಾರ್ಥಿಗಳನ್ನು ಹೊರ ತೆಗೆದರು. ಗಾಯಗೊಂಡ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಿಡುಗಡೆ ಗೊಳಿಸಲಾಗಿದೆ.

- Advertisement -

Related news

error: Content is protected !!