Tuesday, April 30, 2024
spot_imgspot_img
spot_imgspot_img

ಭೂತಾನ್‌ನಿಂದ ಅಡಕೆ ಆಮದು ಮಾಡಿದ್ದರು ರೈತರಿಗೆ ಆತಂಕ ಬೇಡ; ಆರಗ ಜ್ಞಾನೇಂದ್ರ

- Advertisement -G L Acharya panikkar
- Advertisement -

ಬೆಂಗಳೂರು: ಭೂತಾನ್‌ನಿಂದ ಅಡಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧಾರದಿಂದ ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರಿಸಿದ್ದು, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಆಮದು ಮಾತ್ರ ಅನುಮತಿ ನೀಡಲಾಗಿದೆ ಎಂದರು.

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದು ಹೇಳಿದರು. ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.

- Advertisement -

Related news

error: Content is protected !!