Friday, June 26, 2026
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; ಲಕ್ಷಾಂತರ ರೂ ಮೌಲ್ಯದ ಚಿನ್ನ ವಶಕ್ಕೆ..!

- Advertisement -
- Advertisement -

ಮಂಗಳೂರು: ಮಸ್ಕತ್‌ನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 752 ಗ್ರಾಂ ಚಿನ್ನವನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಭಟ್ಕಳ ಮೂಲದ ಇಬ್ಬರು ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಮಸ್ಕತ್‌ನಿಂದ ಗುರುವಾರ ಬಂದಿದ್ದರು. ತಪಾಸಣೆ ವೇಳೆ ಅವರ ಬಳಿ 38,20,160 ರೂ. ಮೌಲ್ಯದ 24 ಕ್ಯಾರೆಟ್‌ನ 752 ಗ್ರಾಂ ಚಿನ್ನ ಪತ್ತೆಯಾಗಿತ್ತು. ಇದನ್ನು ಐದು ಅಂಡಾಕಾರದ ಪ್ಯಾಕೆಟ್‌ಗಳಲ್ಲಿ ಸುತ್ತಿ ದೇಹದ ಒಳಭಾಗದಲ್ಲಿಟ್ಟು ಸಾಗಾಟ ಮಾಡಲಾಗುತ್ತಿತ್ತು. ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!