Monday, June 22, 2026
spot_imgspot_img
spot_imgspot_img

ಪುತ್ತೂರು: ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

- Advertisement -
- Advertisement -

ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪ ತ್ರೆಯಲ್ಲಿ ದಾಖಲಾಗಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ ನಿತಿನ್‌ ಮೃತ ಯುವಕ.

ಸೆ.29 ರಂದು ಗಸ್ತು ನಿರತ ಪೊಲೀಸರು ಸಾಲ್ಮರದಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಅಪಘಾತಗೊಂಡ ಸ್ಥಿತಿಯಲ್ಲಿ ನಿತಿನ್ ಬಿದ್ದಿದ್ದು, ತೀವ್ರ ಗಾಯಗೊಂಡಿದ್ದರು. ಪೊಲೀಸರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ತೀವ್ರ ಗಾಯಗೊಂಡ ಆತನನ್ನು ಪುತ್ತೂರು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

vtv vitla
- Advertisement -

Related news

error: Content is protected !!