Sunday, June 29, 2025
spot_imgspot_img
spot_imgspot_img

ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ; ಬ್ಲೂಟೂತ್ ಸಾಧನ ಬಳಕೆ – 40 ವಿದ್ಯಾರ್ಥಿಗಳು ಅಂದರ್

- Advertisement -
- Advertisement -

ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿದ ಆರೋಪದ ಮೇಲೆ 40 ವಿದ್ಯಾರ್ಥಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಿಹಾರದ ಗಯಾ ಜಿಲ್ಲೆಯಾದ್ಯಂತ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಅಕ್ರಮ ಪತ್ತೆ ಹಚ್ಚಿದ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಗಯಾದಾದ್ಯಂತ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ 36 ವಿದ್ಯಾರ್ಥಿಗಳು ಬ್ಲೂಟೂತ್ ಸಾಧನಗಳನ್ನು ಬಳಸಿ ಸಿಕ್ಕಿಬಿದ್ದಿದ್ದಾರೆ. ಈ ಜಾಲದ ಹಿಂದೆ ಇರುವ ಮಂದಿಯನ್ನು ಕೂಡ ಪತ್ತೆ ಹಚ್ಚಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮದ ಹಿಂದೆ ಹಲವು ಮಂದಿಯ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿದೆ. ಪೇದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!