Thursday, September 10, 2026
spot_imgspot_img
spot_imgspot_img

ತಲೆನೋವಿನಿಂದ ಬಳಲುತ್ತಿದ್ದ ಪುತ್ತೂರು ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿ ಭವ್ಯಾ ಮೃತ್ಯು

- Advertisement -
- Advertisement -

ವಿಟ್ಲ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.24 ರಂದು ಸೋಮವಾರ ಬೆಳಿಗ್ಗೆ ನಡೆದಿದೆ.

ಕಲ್ಲಡ್ಕ ನಿವಾಸಿ ರತಿ ಕುಲಾಲ್ ರವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ.

ಭವ್ಯಾ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ತಲೆನೋವು ಎಂದು ಸ್ಥಳೀಯ ಖಾಸಗಿ ವೈದ್ಯರ ಬಳಿ ಪರೀಕ್ಷೆ ಮಾಡಿ ಮದ್ದು ಪಡೆಯುತ್ತಿದ್ದಳು.

ಆದರೆ ಆದಿತ್ಯವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ‌ ಮಾಡಿದ್ದಳು. ರಾತ್ರಿ ವೇಳೆ ತಲೆ ನೋವು ಜಾಸ್ತಿಯಾಗಿ ವಾಂತಿ ಮಾಡುತ್ತಿದ್ದ ಭವ್ಯಾಳನ್ನು ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಬಂಟ್ವಾಳ ಸರಕಾರಿ ‌ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷೆ ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ‌ ಮಂಗಳೂರು ‌ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.

ಆದರೆ ವೆನ್ಲಾಕ್ ಗೆ 108 ಅಂಬ್ಯುಲೆನ್ಸ್ ನಲ್ಲಿ ಸಾಗಿಸಲಾಯಿತಾದರೂ ದಾರಿ ಮಧ್ಯೆ ಭವ್ಯಾ ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ತಿಳಿಸಿದ್ದಾರೆ. ವೈದ್ಯರ ಪೋಸ್ಟ್ ಮಾರ್ಟ್ಂ ರಿಪೋರ್ಟ್ ಬಳಿಕ ಸಾವಿನ ಕಾರಣ ಗೊತ್ತಾಗಬಹುದು. ಬಂಟ್ವಾಳ ಗ್ರಾಮಾಂತರ ಎಸ್.ಐ ಹರೀಶ್ ವೆನ್ಲಾಕ್ ಆಸ್ಪತ್ರೆಗೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!