Sunday, July 6, 2025
spot_imgspot_img
spot_imgspot_img

ಗುಜರಾತ್ ತೂಗು ಸೇತುವೆ ದುರಂತ: ಮೃತರ ಸಂಖ್ಯೆ 132ಕ್ಕೆ ಏರಿಕೆ

- Advertisement -
- Advertisement -

ಗುಜರಾತ್‌ನ ಮೊರ್ಬಿಯಲ್ಲಿ ಶತಮಾನಗಳಷ್ಟು ಹಳೆಯದಾದ ಬ್ರಿಟಿಷರ ಕಾಲದ , ಇತ್ತೀಚೆಗೆ ನವೀಕರಣಗೊಂಡ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದ್ದು, ಈ ವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಇನ್ನೂ ನಾಪತ್ತೆಯಾಗಿರುವ ಹಲವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ, ನೌಕಾಪಡೆ, ವಾಯುಪಡೆ, ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ನವೀಕರಣಗೊಂಡ ಸೇತುವೆ ಮೇಲೆ ನೂರಾರು ಜನರು ಏಕಾಏಕಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರೇ ಅಧಿಕವಾಗಿದ್ದಾರೆ

- Advertisement -

Related news

error: Content is protected !!