Saturday, June 13, 2026
spot_imgspot_img
spot_imgspot_img

ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸ್ತೀನಿ.: ಪ್ರಶಾಂತ್ ಸಂಬರಗಿ

- Advertisement -
- Advertisement -

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರಿನಲ್ಲಿ ಹೇಳಿದ್ದಾರೆ.ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ.

ಬೆಂಗಳೂರಿನಲ್ಲಿ ಪ್ರಶಾಂತ್​ ಸಂಬರಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಸತ್ಯ ಇದರಲ್ಲಿದೆ,ಸತ್ಯ ತೆಗೆದುಕೊಂಡು ಹೊರಟಿದ್ದೇನೆ.ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸ್ತೀನಿ ಜಮೀರ್,ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು ಕೊಡುತ್ತೇನೆ ಎಂದು ಹೇಳಿದ್ದಾರೆ.ಜಮೀರ್ ಅಹಮ್ಮದ್ ಖಂಡಿತ ಅವರ ಆಸ್ತಿಯನ್ನು ಸರ್ಕಾರಕ್ಕೆ ನೀಡಬೇಕಾಗುತ್ತೆ. ಅದಕ್ಕೆ ಸಂಬಂಧಿಸಿದ ದಾಖಲಾತಿಗಳು ನನ್ನ ಬಳಿ ಇದೆ ಎಂದು ಫೈಲ್ ತೋರಿಸಿದ ಪ್ರಶಾಂತ್ ಸಂಬರಗಿ, ಸಿಸಿಬಿ ಕಚೇರಿಗೆ ತೆರಳಿದ್ದಾರೆ.

ಈ ಹಿಂದೆ ಮಾತನಾಡಿದ್ದ ಜಮೀರ್ ಅಹಮ್ಮದ್, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸಾಬೀತಾದರೆ, ನಾನು ಸಂಜನಾ ಜೊತೆ ಕೊಲಂಬೋಗೆ ಹೋಗಿದ್ದರೆ ಆರೋಪ ಸಾಬೀತಾದ್ರೆ ನನ್ನೆಲ್ಲಾ ಆಸ್ತಿ ಅನ್ನು ಸರ್ಕಾರಕ್ಕೆ ಕೊಡುತ್ತೇನೆ ಎಂದಿದ್ದ ಮಾಜಿ ಸಚಿವ ಜಮೀರ್ ಹೇಳಿದ್ದರು.

- Advertisement -

Related news

error: Content is protected !!