- Advertisement -
- Advertisement -
ನವದೆಹಲಿ:- ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ರಾತ್ರಿ ಮತ್ತೆ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ಆಗಸ್ಟ್ 31 ರಂದು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಅಮಿತ್ ಶಾ ರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾದರೆ ನಿರಂತರ ಚಿಕಿತ್ಸೆಗೆ ಸಹಕಾರಿಯಾಗಲಿದೆ ಎಂಬ ಉದ್ದೇಶದಿಂದ ಆಸ್ಪತ್ರೆಯಲ್ಲಿರುವ ಕಾರ್ಡಿಯೋ ನ್ಯೂರೋ ಟವರ್ ವಿಭಾಗದಲ್ಲಿ ದಾಖಲಿಸಲಾಗಿದೆ.
- Advertisement -