Thursday, July 3, 2025
spot_imgspot_img
spot_imgspot_img

ಬೆಳ್ತಂಗಡಿ: ‘ಉಡ’ ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ

- Advertisement -
- Advertisement -

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿಯಲಾಯಿತು.

ಉದ್ಯಮಿ ಶಶಿರಾಜ್ ಶೆಟ್ಟಿಯವರ ಮನೆಯ ಹಿಂಭಾಗದಲ್ಲಿ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು.

ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು ಕಾಳಿಂಗ ಸರ್ಪವನ್ನು ಹಿಡಿಯುವ ಸಂದರ್ಭದಲ್ಲಿ ಕಾಳಿಂಗ ಸರ್ಪ ಅವರ ಮೇಲೆರಗಿದ ಘಟನೆಯು ನಡೆಯಿತು. ಆದರೂ ಅತ್ಯಂತ ಸಾಹಸದಿಂದ ಅಂತಿಮವಾಗಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

- Advertisement -

Related news

error: Content is protected !!