Tuesday, May 7, 2024
spot_imgspot_img
spot_imgspot_img

ವಿಟ್ಲ: (ಜ.03-08) ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ

- Advertisement -G L Acharya panikkar
- Advertisement -

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನ ಇಡ್ಕಿದು ಇಲ್ಲಿ ದಿನಾಂಕ 03-01-2023 ರಿಂದ 08-01-2023 ರವರೆಗೆ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ದಿನಾಂಕ: 03-01-2023 ರಂದು ಬೆಳಿಗ್ಗೆ ಧ್ವಜಾರೋಹಣವನ್ನು ಹಿರಿಯ ಸಹಕಾರಿ ಕೊಂಕೋಡಿ ಪದ್ಮನಾಭ ನೇರವೇರಿಸಲಿದ್ದಾರೆ. ಸಾಮೂಹಿಕ ಪ್ರಾರ್ಥನೆ ನಂತರ ಉಗ್ರಾಣ ಮುಹೂರ್ತವನ್ನು ದೀಪ ಪ್ರಜ್ವಲಿಸುವ ಮೂಲಕ ಕೆ.ಎಸ್ ಶಂಕರಭಟ್ಟ, ಉರಿಮಜಲು ಮಾಡಲಿದ್ದಾರೆ. ಊರವರಿಂದ ಹಸಿರುವಾಣಿ ಹೊರೆಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಕ್ಷೇತ್ರ ತಂತ್ರಿಗಳು ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ ನಡೆಯಲಿದೆ.

ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಆರ್ಶಿವರ್ಚನ ಮತ್ತು ದೀಪ ಪ್ರಜ್ವಲನೆಯ ಮೂಲಕ ಶ್ರೀ ನಿತ್ಯಾನಂದ ಯೋಗಾಶ್ರಮ, ಶ್ರೀ ಕ್ಷೇತ್ರ ಕೊಂಡೆವೂರು-ಉಪ್ಪಳ ಯೋಗಾನಂದ ಸರಸ್ವತಿ ಸ್ವಾಮೀಜಿ ನೇರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ವಹಿಸಲಿದ್ದು, ಉಪನ್ಯಾಸವನ್ನು ಸ್ನಾತಕೋತ್ತರ ವಿಭಾಗ,ವಿವೇಕಾನಂದ ಮಹಾವಿದ್ಯಾಲಯ ನೆಹರು ನಗರ ಸಂಯೋಜಕರು ಡಾ. ವಿಜಯ ಸರಸ್ವತಿ ಇವರು ಮಾಡಲಿದ್ದಾರೆ.

ಅತಿಥಿಗಳಾಗಿ ಪದ್ಮನಾಭ ಶೆಟ್ಟಿ ,ಪದ್ಮ ಸೋಲಾರ್ ಸಿಸ್ಟಮ್, ದಯಾನಂದ ಶೆಟ್ಟಿ ಉಜಿರೆಮಾರ್, ಅಧ್ಯಕ್ಷರು ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ, ಚೆನ್ನಪ್ಪ ಗೌಡ ಯೋಜನಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ), ಸುಧಾಕರ ಶೆಟ್ಟಿ. ಬಿ, ಬೀಡಿನಮಜಲು, ಅಧ್ಯಕ್ಷರು ಇಡ್ಕಿದು ಸೇವಾ ಸಹಕಾರಿ ಸಂಘನಿ., ಸತೀಶ್ ಸಪಲ್ಯ ಜೆ.ಇ ಮೆಸ್ಕಾಮ ವಿಟ್ಲ, ಗೋಕುಲ್‌ದಾಸ್ ಭಕ್ತ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಇಡ್ಕಿದು ಗ್ರಾಮ ಪಂಚಾಯತ್, ಸತೀಶ್ ರೈ ಡಿಂಬ್ರಿಗುತ್ತು,ಅಧ್ಯಕ್ಷರು ಅಡ್ಯಲಾಯ ಮತ್ತು ಸಪರಿವಾರ ದೈವಗಳ ಸನ್ನಿಧಿ ಕಬಕ, ಜಗದೀಶ ಪೂಜಾರಿ ಅಳಕೆಮಜಲು, ಅಧ್ಯಕ್ಷರು ಶ್ರೀ ಶಾರದಾಂಬ ಭಜನಾ ಮಂದಿರ ಅಳಕೆ, ಈಶ್ವರ ನಾಯ್ಕ್, ಮುಖ್ಯ ಕಾರ್ಯನಿರ್ವಣಾಧಿಕಾರಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ,ನಾಗೇಶ ಕುಂಡಡ್ಕ, ವಾಸ್ತು ತಜ್ಞರು ಭಾಗವಹಿಸಲಿದ್ದಾರೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ ಭಜನೆ, ನೃತ್ಯಾರ್ಪಣಂ ಭರತನಾಟ್ಯ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕಾರ್ಣಿಕದ ಕಲ್ಕುಡೆ ತುಳು ನಾಟಕ ನಡೆಯಲಿದೆ.

ಜ. 04 ರಂದು ಬೆಳಿಗ್ಗೆ ಉಷಾ ಪೂಜೆ, ಗಣಪತಿ ಹೋಮ, ಅಂಕುರ ಪೂಜೆ, ಚತುಃ ಶುದ್ಧಿಧಾರೆ, ಅವಗಾಹ, ಪಂಚಕ ಬಿಂಬಶುದ್ಧಿ, ಖನನಾದಿ ಸ್ಥಳ ಶುದ್ಧಿ ಪ್ರೋಕ್ತ ಹೋಮ, ಸ್ಕಾಂದ ಪ್ರಾಯಶ್ಚಿತ ಹೋಮಗಳು, ಹೋಮಗಳ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಬಳಿಕ ದೀಪಾರಾಧನೆ, ಅಂಕುರ ಪೂಜೆ, ಕುಂಡಶುದ್ಧಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಬಳಿಕ ನಡೆಯುವ ಧಾಮಿಕ ಸಭೆಯಲ್ಲಿ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಎಂ.ಎಚ್. ರಮೇಶ್ ಭಟ್ ಮಿತ್ತೂರು ಭಂಡಾರದ ಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸರ‍್ಯನಾರಾಯಣ ಭಟ್ ಕಶೆಕೋಡಿ ಉಪನ್ಯಾಸ ನೀಡಲಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಗುತ್ತು, ಕ್ಯಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ನ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ನಿರ್ದೇಶಕ ರಾಜಾರಾಮ ಭಟ್, ರೈ ಎಜುಕೇಶನಲ್ &ಚಾರಿಟೇಬಲ್ ಟ್ರಸ್ಟ್ನ ಸಂಚಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಬನ್ನೂರು ರೈತಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕುಂಜಾರು ಮದಗಶ್ರೀ ಜನಾರ್ಧನ ದೇವಸ್ಥಾನದ ಅಧ್ಯಕ್ಷ ಹಾರೆಕೆರೆ ವೆಂಕಟ್ರಮಣ ಭಟ್, ಮಂಗಳೂರು ನವಚೇತನ ಚಿಟ್ಸ್ ಪ್ರೈ.ಲಿ. ಎಂ.ಡಿ ಲೋಕೇಶ್ ಶೆಟ್ಟಿ, ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ನಳಿಲು, ಪಾಣೆಮಂಗಳೂರು ಸುಮಂಗಲಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷ ನಾಗೇಶ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಜನೆ, ಯಕ್ಷಗಾನ ತಾಳಮದ್ದಳೆ, ನೃತ್ಯ ಭಜನೆ, ‘ಶಿವಧೂತೆ ಗುಳಿಗೆ’ ತುಳು ನಾಟಕ ನಡೆಯಲಿದೆ.

ಜ. 05 ರಂದು ಬೆಳಿಗ್ಗೆ ಉಷಾ ಪೂಜೆ, ಮಹಾಗಣಪತಿ ಹೋಮ, ಅಂಕುರ ಪೂಜೆ, ಸ್ವ-ಶಾಂತಿ, ಶ್ವಾನಶಾಂತಿ, ಅದ್ಭುತ ಶಾಂತಿ, ಚೋರ ಶಾಂತಿ ಹೋಮಾದಿಗಳು, ಹೋಮಗಳ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ದೀಪಾರಾಧನೆ, ಅಂಕುರ ಪೂಜೆ, ಕುಂಭೇಶ ಕರ್ಕರೀಪೂಜೆ, ಅನುಜ್ಞಾಕಲಶ ಪೂಜೆ, ಪರಿಕಲಶ ಪೂಜೆ, ಅಧಿವಾಸ ಹೋಮ, ಕಲಶಾಧಿವಾಸ, ದುರ್ಗಾಪೂಜೆ , ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ಗುರುದೇವದತ್ತ ಸಂಸ್ಥಾನಮ್, ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ. ಹಿಂದುಳಿದ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇAದ್ರ ಕುಮಾರ್, ದ.ಕ.ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಸುಚರಿತ ಶೆಟ್ಟಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪುತ್ತೂರು ಪೆಟ್ರೋ ಕೆಮಿಕಲ್ ಮೆನೆಜಿಂಗ್ ಡೈರೆಕ್ಟರ್ ಉದಯ ಭಟ್, ಕಾರ್ತಿಕ್ ತಂತ್ರಿ ಕೆಮ್ಮಿಂಜೆ, ಮಹಾವೀರ ಆಸ್ಪತ್ರೆ ಎಂ.ಡಿ ಡಾ|ಸುರೇಶ್ ಪುತ್ತೂರಾಯ, ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್‌ನ ಆಯುರ್ವೇದ ತಜ್ಞರು ಡಾ.ಸುಧಾ ಶ್ರೀಪತಿ ರಾವ್, ವೇದಮೂರ್ತಿ ಶ್ರೀಧರ ಭಟ್ ಕಬಕ, ಕುಮಟಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರ್ಧ ಏಕಾಹ ಭಜನೆ, ನೃತ್ಯ ಭಜನೆ, ಯಕ್ಷಗಾನ ಬಯಲಾಟ ನಡೆಯಲಿದೆ.

ಜ. 06 ರಂದು ಉಪಾಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಸೃಷ್ಟಿತತ್ವ ಹೋಮ, ತತ್ವಕಲಶ ಪೂಜೆ, ತತ್ವಕಲಶಾಭಿಷೇಕ, ಸ್ಕಂದಯಾಗ, ಅನುಜ್ಞಾ ಕಲಶಾಭಿಷೇಕ, ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ದೀಪಾರಾಧನೆ, ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀಮದ್ ವಿದ್ಯಾಮಾನ್ಯತೀರ್ಥ ಸಂಸ್ಥಾನಮ್ ಶ್ರೀ ವಜ್ರದೇಹಿ ಶ್ರೀ ಭದ್ರದೇಹಿಮಠ ಗುರುಪುರ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ.
ರಾ.ಸ್ವ.ಸೇ.ಸಂಘದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ದ.ಕಜಿಲ್ಲಾ ಉಸ್ತುವಾರಿ, ಸಚಿವರು ಸುನಿಲ್ ಕುಮಾರ್, ಎಸ್. ಆರ್. ರಂಗಮೂರ್ತಿ ಪುಣಚ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ವಸಂತ ಸಾಲ್ಯಾನ್, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಸಾ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ, ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕುಂಬ್ರ ಮೂರ್ತೆದಾರರ ಸೇ.ಸ.ಸಂಘದ ಅಧ್ಯಕ್ಷ ಆರ್.ಸಿ ನಾರಾಯಣ, ಲಕ್ಷ್ಮೀ ಅಮ್ಮ ಮುಕ್ಕುಡ, ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅಳಕೆಮಜಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ, ನೃತ್ಯ ಭಜನೆ, ಶಿವಂ ಡ್ಯಾನ್ಸ್ ಅಕಾಡೆಮಿ ವಿಟ್ಲ ಇವರಿಂದ ಕಾರ‍್ಯಕ್ರಮ ನಡೆಯಲಿದೆ.

ದಿನಾಂಕ 07-01-2023ರಂದು ವೈದಿಕ ಹಾಗೂ ತಾಂತ್ರಿಕ ಕಾರ್ಯಕ್ರಮಗಳಾದ ಉಷಾ ಪೂಜೆ, ಅಂಕುರ ಪೂಜೆ , ಮಹಾಗಣಪತಿ ಹೋಮ, ಮಂಟಪ ಸಂಸ್ಕಾರ, ಅಗ್ನಿಜನನ, ಕುಂಬೇಶ ಕರ್ಕರಿ ಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಆಶ್ಲೇಷ ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ದೀಪಾರಾಧನೆ ಅಧಿವಾಸ ಹೋಮ, ಕಲಶಾಧಿವಾಸ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರು, ವೇ. ಮೂ. ತಿರುಮಲೇಶ್ವರ ಭಟ್‌, ಅನೂಚಾನ ನಿಲಯ ವಹಿಸಲಿದ್ದಾರೆ. ಆಶೀರ್ವಚನವನ್ನು ಶ್ರೀ ಆದಿಚುಂಚನಗಿರಿ ಶಾಖಾ ಮಠ, ಮಂಗಳೂರು ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮಾಡಲಿದ್ದು , ಉಪನ್ಯಾಸವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಕೇಶವ ಬಂಗೇರ ಅಧ್ಯಾಪಕರು ನೆರವೇರಿಸಲಿದ್ದರೆ. ಅತಿಥಿಗಳಾಗಿ ಅಂಗಾರ, ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಮತ್ತು ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವರು ಕರ್ನಾಟಕ ಸರ್ಕಾರ, ಡಿ. ವಿ. ಸದಾನಂದ ಗೌಡ, ಲೋಕಸಭಾ ಸದಸ್ಯರು, ಬೆಂಗಳೂರು, ಮುರಳಿಕೃಷ್ಣ ಹಸಂತಡ್ಕ, ಸದಸ್ಯರು ಜಿಲ್ಲಾ ಧಾರ್ಮಿಕ ಪರಿಷತ್, ಚಂದ್ರ ಕೋಲ್ಚಾರ್, ಅಧ್ಯಕ್ಷರು, ದ.ಕ.ಜಿಲ್ಲಾ ಜೇನು ವ್ಯವಸಾಯ ಸಹಕಾರಿ ಸಂಘ, ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಗತಿಪರ ಕೃಷಿಕರು, ಅರುಣ್ ಕುಮಾರ್ ಪುತ್ತಿಲ, ಧಾರ್ಮಿಕ ನೇತಾರರು, ಹರಿಣಿ ಪುತ್ತೂರಾಯ, ಪ್ರಾಂಶುಪಾಲರು, ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ಡಾ. ಕೃಷ್ಣ ಭಟ್ ಕೊಂಕೋಡಿ, ಕಾರ್ಯದರ್ಶಿ, ವಿದ್ಯಾವರ್ಧಕ ಸಂಘ ಪುತ್ತೂರು, ಕೃಷ್ಣಯ್ಯ ವಿಟ್ಲ, ವಿಟ್ಲ ಅರಮನೆ, ಜೆ. ಕೃಷ್ಣ ಭಟ್, ಅಧ್ಯಕ್ಷರು, ಶ್ರೀ ಉಳ್ಳಾಕುಲು ಧೂಮಾವತಿ ಮಲರಾಯ ದೈವಸ್ಥಾನ ಕೆದಿಲ ಭಾಗವಹಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಾದ ಯಕ್ಷಗಾನ ತಾಳ ಮದ್ದಳೆ, ನೃತ್ಯ ಭಜನೆ, ಭಾವ-ಯೋಗ-ಗಾನ ನೃತ್ಯ ವೈಭವ ನಡೆಯಲಿದೆ.

ದಿನಾಂಕ: 08-01-2023ರಂದು ವೈದಿಕ ಹಾಗೂ ತಾಂತ್ರಿಕ ಕಾರ್ಯಕ್ರಮಗಳಾದ ಮಹಾಗಣಪತಿ ಹೋಮ, ಶ್ರೀ ಷಣ್ಮುಖಸುಬ್ರಹ್ಮಣ್ಯ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮ ಕಲಶ ಅಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಶ್ರೀ ದೇವರ ಬಲ ಹೊರಟು ಶ್ರೀ ಭೂತಬಲ ಉತ್ಸವ, ಬಟ್ಟಲು ಕಾಣಿಕೆ ವಸಂತಕಟ್ಟೆ ಪೂಜೆ ನಡೆಯಲಿದೆ. ಧಾರ್ಮಿಕ ಸಭೆ ಮತ್ತು ಸಮಾರೋಪದ ಅಧ್ಯಕ್ಷತೆಯನ್ನು ಕೋಲ್ಪೆ ದೇವಸ್ಥಾನದ ಆಡಳಿತ ಮೊಕ್ತೇಸರರು ಸುರೇಶ್ ಕೆ ಎಸ್ , ಆಶೀರ್ವಚನ ಸಂಸ್ಥಾನ ಗೋಕರ್ಣ, ರಾಮಚಂದ್ರಾಪುರ ಮಠ ಹೊಸನಗರ ಶ್ರೀಮದ್‌ ಜಗದ್ಗುರು ಶಂಕರಾಚಾರ್ಯ, ರಾಘವೇಶ್ವರ ಭಾರತೀ ಸ್ವಾಮಿ, ಉಪನ್ಯಾಸವನ್ನು ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷರು, ಡಾ. ಪ್ರಭಾಕರ ಭಟ್‌ ಕಲ್ಲಡ್ಕ , ನೀಡಲಿದ್ದಾರೆ. ಅತಿಥಿಗಳಾಗಿ ಶೋಭಾ ಕರಂದ್ಲಾಜೆ, ಕೃಷಿ ಮತ್ತು ರೈತ ಕಲ್ಯಾಣ ಸಚಿವರು, ನಳೀನ್‌ ಕುಮಾರ್‌ ಕಟೀಲು ಲೋಕಸಭಾ ಸದಸ್ಯರು, ಮಂಗಳೂರು, ಕಮಲಕೃಷ್ಣ ಭಟ್‌ ಕೂಡುರು, ಶೇಖರ್‌ ನಾರಾವಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಎ. ಸಂ‍ತೋಷ್‌ ಕುಮಾರ್‌ ಕಾಯರ್‌ ಮಜಲು, ಮಹೇಶ್ವರ ಬಾಟ್ಲಿಂಗ್‌ ಕಂಪೆನಿ, ದಿನಕರ ಭಟ್‌ ಮಾವೆ, ಚೆಯರ್‌ಮ್ಯಾನ್‌ ದಿಗ್ವಿಜಯ ಗ್ರೂಫ್‌ ಆಫ್‌ ಕಂಪೆನೀಶ್‌ ಭಾಗವಹಿಸಲಿದ್ದಾರೆ.

ರಾತ್ರಿ ಶ್ರೀ ಪಾಂಚಜನ್ಯ ಯಕ್ಷಗಾನ ಕಲಾತಂಡ(ರಿ) ನೇರಳಕಟ್ಟೆ ಇವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.

ದಿನಾಂಕ 25-02-2023ರಂದು ಷಣ್ಮುಖ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ದೃಢ ಕಲಾಶಾಭಿಷೇಕ ನಡೆಯಲಿದೆ.

vtv vitla
- Advertisement -

Related news

error: Content is protected !!