ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಶೀಘ್ರ ಬಿಡುಗಡೆಯಾಗಲಿದ್ದಾರೆ. ಎಂಬ ಸುದ್ದಿ ಸಾಕಷ್ಟು ವೈರಲ್ ಆಗಿದೆ. ಆದರೆ ಸದ್ಯ ಆಕೆಯ ಬಿಡುಗಡೆಯ ಕುರಿತು ಸ್ಪಷ್ಟತೆ ಲಭಿಸಿದ್ದು, ಮುಂದಿನ ವರ್ಷ ಜನವರಿ 27 ರಂದು ಆಕೆಯ ಬಿಡುಗಡೆಯ ಸಾಧ್ಯತೆ ಇದೆ ಎಂದು ಆರ್ಟಿಐ ಅರ್ಜಿ ಮೂಲಕ ತಿಳಿದುಬಂದಿದೆ.
In reply to an RTI query, Bengaluru Central Prison's Public Information Officer states 'Convict Sasikala's probable date of release is 27-01-2021 provided in-default fine is paid. Probable date would be 27-02-2022 if fine not paid. Date may vary if she utilises parole facility'. pic.twitter.com/NVJbQeN7kr
— ANI (@ANI) September 15, 2020
ಶಶಿಕಲಾ ಬಿಡುಗಡೆಯ ಕುರಿತು ನರಸಿಂಹ ಮೂರ್ತಿ ಅವರು ಸಲ್ಲಿಸಲಾಗಿದ್ದ ಆರ್ಟಿಐ ಅರ್ಜಿಗೆ ಜೈಲಾಧಿಕಾರಿಗಳು ಉತ್ತರ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯೊಂದಿಗೆ 10 ಕೋಟಿ ರೂ. ದಂಡ ವಿಧಿಸಿದೆ. ಈ ಮೊತ್ತವನ್ನು ಶಶಿಕಲಾ ಪಾವತಿ ಮಾಡಿದರೆ ಅವರ ಬಿಡುಗಡೆಗೆ ಅವಕಾಶವಿದೆ. ಇಲ್ಲವಾದರೇ ಮತ್ತೆ ಒಂದು ವರ್ಷ ಶಶಿಕಲಾ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.