Tuesday, September 8, 2026
spot_imgspot_img
spot_imgspot_img

ಕಾಸರಗೋಡು: ರೈಲು ಬಡಿದು ಕಾಲೇಜು ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲು ಬಡಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.

ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.

ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈಕೆಯ ಮೊಬೈಲ್ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಹಳಿ ಪಕ್ಕದಲ್ಲಿ ಪತ್ತೆಯಾಗಿದೆ.

ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.

- Advertisement -

Related news

error: Content is protected !!