Saturday, July 5, 2025
spot_imgspot_img
spot_imgspot_img

ಪುಲ್ವಾಮದಲ್ಲಿ ಬುಲ್ಡೋಜರ್ ಕಾರ್ಯಾಚರಣೆ; ಭಯೋತ್ಪಾದಕನ ಮನೆ ಧ್ವಂಸ

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದಿದ್ದು, ಪುಲ್ವಾಮಾದಲ್ಲಿ ಅಧಿಕಾರಿಗಳು ಬುಲ್ಡೋಜರ್ ಕಾರ್ಯಾಚರಣೆ ಮೂಲಕ ಭಯೋತ್ಪಾದಕನ ಮನೆಯನ್ನು ಧ್ವಂಸಗೊಳಿಸಿದ್ದಾರೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಆಶಿಕ್ ನೆಂಗ್ರೂ ಮನೆಯನ್ನು ಧ್ವಂಸಗೊಳಿಸಲಾಯಿತು. ನ್ಯೂ ಕಾಲೋನಿ ನೆರೆಹೊರೆಯಲ್ಲಿರುವ ಎರಡು ಅಂತಸ್ತಿನ ಮನೆಯನ್ನು ಧರಾಶಾಹಿಗೊಳಿಸಿದ ಬಳಿಕ ಮಾತನಾಡಿದ ಅಧಿಕಾರಿಗಳು ಪುಲ್ವಾಮಾ ಜಿಲ್ಲೆಯ ರಾಜ್‌ಪೋರಾದಲ್ಲಿ ಅತಿಕ್ರಮಿಸಿದ ಸರ್ಕಾರಿ ಭೂಮಿಯಲ್ಲಿ ಈ ಮನೆ ನಿರ್ಮಾಣಗೊಂಡಿತ್ತು ಎಂದಿದ್ದಾರೆ.

2019 ರಲ್ಲಿ ಈತ ಪಾಕಿಸ್ತಾನಕ್ಕೆ ತೆರಳಿದ್ದಾನೆ. ವಿವಿಧ ಭಯೋತ್ಪಾದಕ ಕೃತ್ಯಗಳಲ್ಲಿ ಈತನ ಕೈವಾಡದ ಶಂಕೆ ಇದೆ ಎನ್ನಲಾಗಿದೆ. ಇನ್ನು ಭಯೋತ್ಪಾದಕ ಗುಂಪುಗಳ ನಡುವಿನ ಗಲಾಟೆಯಲ್ಲಿ ನೆಂಗ್ರೂ ಸಹೋದರ ಮಂಜೂರ್ ಅಹ್ಮದ್ ಕಳೆದ ಕೆಲ ತಿಂಗಳ ಹಿಂದಷ್ಟೇ ಹತ್ಯೆಯಾಗಿದ್ದ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

- Advertisement -

Related news

error: Content is protected !!