Friday, June 5, 2026
spot_imgspot_img
spot_imgspot_img

ಡ್ರಗ್ಸ್ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ 14 ದಿನ ನ್ಯಾಯಾಂಗ ಬಂಧನ.!

- Advertisement -
- Advertisement -

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಜೈಲು ಸೇರಿದ ಬೆನ್ನಲ್ಲೇ ಬಹುಭಾಷಾ ನಟಿ ಸಂಜನಾ ಗಲ್ರಾನಿ ಅವರನ್ನೂ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಈ ಮೂಲಕ ಡ್ರಗ್ಸ್‌ ಪ್ರಕರಣದಲ್ಲಿ ಜೈಲು ಸೇರಿದ ಎರಡನೇ ನಟಿ ಎಂಬ ಕುಖ್ಯಾತಿಗೆ ಸಂಜನಾ ಪಾತ್ರವಾಗಿದ್ದಾರೆ.

ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾರನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಧೀಶರು ನಟಿ ಸಂಜನಾಗೆ 14 ದಿನ ಅಂದರೆ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಸಾಂತ್ವನ ಕೇಂದ್ರದಲ್ಲಿದ್ದ ಸಂಜನಾರನ್ನು ಬೆಳಗ್ಗೆ ಕೆಸಿ ಜನರಲ್ ಆಸ್ಪತ್ರಗೆ ಕರೆತಂದು ವೈದ್ಯಕೀಯ ಪರೀಕ್ಷೆ, ಕೊರೊನಾ ಟೆಸ್ಟ್‌  ನಡೆಸಲಾಯಿತು. ಬಳಿಕ ಸಾಂತ್ವನ ಕೇಂದ್ರಕ್ಕೆ ಕರೆತಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಇಂದಿನ ವಿಚಾರಣೆ ವೇಳೆ ಸಿಸಿಬಿ ಪೊಲೀಸರು ಕಸ್ಟಡಿಗೆ ನೀಡುವಂತೆ ಕೇಳಿರಲಿಲ್ಲ. ಹೀಗಾಗಿ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತು.

- Advertisement -

Related news

error: Content is protected !!