Thursday, July 23, 2026
spot_imgspot_img
spot_imgspot_img

ಉಳ್ಳಾಲ: ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್‌ ಮೃತದೇಹ ಚರಂಡಿಯಲ್ಲಿ ಪತ್ತೆ

- Advertisement -
- Advertisement -

ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ ( 45) ಮೃತ ದುರ್ದೈವಿ.

ಏಜೆನ್ಸಿ ಮೂಲಕ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದೆ ಇದ್ದು, ಇಂದು ನಸುಕಿನ ಜಾವ ಕುತ್ತಾರು ಜಂಕ್ಷನ್‌ನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. ದೇರಳಕಟ್ಟೆಯ ಬೆಳ್ಮ ಭಾಗದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗುವಿನ ಜತೆಗೆ ವಾಸವಾಗಿದ್ದರು. ಪತ್ನಿ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಜೆ ನಂತರ ದೇರಳಕಟ್ಟೆ ಖಾಸಗಿ ಹೊಟೇಲಿನಲ್ಲಿ ಅಡುಗೆ ಕೆಲಸವನ್ನು ಮಾಡುತ್ತಿದ್ದರು.

ಮೃತ ಗಣೇಶ್ ಕುಡಿತದ ಅಭ್ಯಾಸವನ್ನು ಹೊಂದಿದ್ದರು. ಅಪರಿಚಿತ ವಾಹನ ಢಿಕ್ಕಿ ಹೊಡೆದು ಚರಂಡಿಗೆ ಎಸೆಯಲ್ಪಟ್ಟು ಸಾವನ್ನಪ್ಪಿದರೇ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ತಲೆಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!