Monday, June 8, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಕೊನೆಗೂ ಠಾಣೆಗೆ ಹಾಜರಾದ ನಾಪತ್ತೆಯಾಗಿದ್ದ ಗ್ರಾ.ಪಂ ಸದಸ್ಯೆ..!

- Advertisement -
- Advertisement -

ಸುಬ್ರಹ್ಮಣ್ಯ: ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಭಾರತಿ ಮೂಕಮಲೆ ಕೊನೆಗೂ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.

ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ತನ್ನ ಪ್ರಿಯಕರನೊಂದಿಗಿರುವ ಬಗ್ಗೆ ಸ್ವತಃ ಭಾರತಿ ವಿಡಿಯೋ ಮೂಲಕ ಕುಟುಂಬಸ್ಥರಿಗೆ ತಿಳಿಸಿದ್ದರು. ಇದೀಗ ಸುಬ್ರಹ್ಮಣ್ಯ ಪೊಲೀಸರು ಅವರನ್ನು ಹುಡುಕುವ ಪ್ರಯತ್ನ ಮಾಡಿದ್ದರು.

ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ನೊಂದಿಗೆ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದು ನಂದನ್ ನೊಂದಿಗೆ ಜೀವನ ಮುಂದುವರೆಸುವ ತನ್ನ ನಿರ್ಧಾರವನ್ನು ಲಿಖಿತ ರೂಪದಲ್ಲಿ ಬರೆದು ಕೊಟ್ಟು ನಂದನ್ ನೊಂದಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!