ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8626 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,179 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 502982 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 394026 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3623 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 37 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2725 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41914 ಮಂದಿಯಲ್ಲಿ ಪತ್ತೆಯಾಗಿದೆ.
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 456 ಮಂದಿಗೆ ಸೋಂಕು ತಗುಲಿದೆ. ಇಂದು 11 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 340 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 19322 ಆಗಿದ್ದು, ಇಲ್ಲಿಯವರೆಗೆ 14346 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4506 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 472 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 493 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 14891 ಆಗಿದ್ದು ,ಇಲ್ಲಿಯವರೆಗೆ 13175 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1578 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.