Tuesday, July 1, 2025
spot_imgspot_img
spot_imgspot_img

ಹುಟ್ಟುಹಬ್ಬಕ್ಕೆ ಶುಭಾಶಯ ಮಾಡಿದ ಕೊಹ್ಲಿಗೆ ಪ್ರಧಾನಿ ಮೋದಿ ಹೇಳಿದ್ದೇನು..?

- Advertisement -
- Advertisement -

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರವಷ್ಟೇ 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ದೇಶ ವಿದೇಶದಿಂದ ಹಲವಾರು ರಾಜಕೀಯ ನಾಯಕ, ನಟ-ನಟಿಯರು ಮತ್ತು  ಕ್ರೀಡಾಪಟುಗಳು ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭ ಕೋರಿದ್ದರು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರೀಡಾವಲಯದ ದಿಗ್ಗಜರು ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದರು. ಯುಎಇಯಲ್ಲಿರುವ ಕೊಹ್ಲಿ, ಕಠಿಣ ತರಬೇತಿ ನಡುವೆಯೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ.

ವಿರಾಟ್ ಕೊಹ್ಲಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ  ನಾನು ಕೂಡ ನಿಮಗೆ ಮತ್ತು ಅನುಷ್ಕಾ ಶರ್ಮಾ ಅವರಿಗೆ ಶುಭಾಶಯ ಹೇಳಲು ಇಷ್ಟಪಡುತ್ತೇನೆ. ನೀವಿಬ್ಬರು ಉತ್ತಮ ಪೋಷಕರಾಗುತ್ತೀರಿ ಎಂದು ನನಗೆ ನಂಬಿಕೆ ಇದೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕೊಹ್ಲಿ ಕೂಡ ಪ್ರಧಾನಿಗೆ ಧನ್ಯವಾದ ಅರ್ಪಿಸಿದ್ದಾರೆ.

- Advertisement -

Related news

error: Content is protected !!