Sunday, June 21, 2026
spot_imgspot_img
spot_imgspot_img

ಕಡಬ: ಸಾಮಾಜಿಕ ಜಾಲಾತಾಣದಲ್ಲಿ ಭಜಕರಿಗೆ ನಿಂದನೆ; ಅರಣ್ಯಾಧಿಕಾರಿ ಸಂಜೀವ ಪೂಜಾರಿ ಸಸ್ಪೆಂಡ್

- Advertisement -
- Advertisement -

ಕಡಬ: ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಅಶ್ಲಿಲವಾಗಿ ಪೋಸ್ಟ್ ಹಾಕುತ್ತಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಅಮಾನತುಗೊಳಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಡಾಫೆಯಾಗಿ ವರ್ತಿಸಿದ ಕೊಯಿಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರು ಅಮಾನತುಗೊಳಿಸಿ ಆದೇಶಹೊರಡಿಸಿದ್ದಾರೆ.

ಸಂಜೀವ ಪೂಜಾರಿಯವರು ಹಲವಾರು ಬಾರಿ ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಂಘಟನೆಯವರ ಕೆಂಗಣ್ಣಿಗೆ ಗುರಿಯಾಗಿದ್ದರು. ತಿಂಗಳುಗಳ ಹಿಂದೆ ಭಜಕರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಇದರ ವಿರುದ್ದ ಬಜರಂಗದಳದ ಕಾರ್ಯಕರ್ತರು ಇವರ ಅಮಾನತಿಗೆ ಒತ್ತಾಯಿಸಿ ಬೀದಿಗೆ ಇಳಿದಿದ್ದರು. ಇದೀಗ ಇವರ ಅಮಾನತು ಬಜರಂಗದಳದ ಹೋರಾಟಕ್ಕೆ ಸಿಕ್ಕಿದ ಜಯವಾಗಿದೆ.

- Advertisement -

Related news

error: Content is protected !!