Saturday, June 20, 2026
spot_imgspot_img
spot_imgspot_img

ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ವಜಾ

- Advertisement -
- Advertisement -

ಸುಬ್ರಹ್ಮಣ್ಯ: ಅನ್ಯ ಕೋಮಿನ ಯುವಕನೋರ್ವ ಅಪ್ರಾಪ್ತ ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ, ಮೊಬೈಲ್ ನಂಬರ್ ಕೇಳಿದಕ್ಕೆ ನಿರಾಕರಿಸಿದಾಗ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಹಫೀದ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ ರವರು ವಿಚಾರಣೆ ನಡೆಸಿ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಪ್ರಾಪ್ತ ಹಿಂದೂ ಯುವತಿಯೋರ್ವಳು ಕಾಲೇಜಿನಿಂದ ಮನೆಗೆ ಹೋಗಲು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿದ್ದ ವೇಳೆ ಹಫೀದ್ ಎಂಬಾತ ಪ್ರೀತಿಸುವಂತೆ ಒತ್ತಡ ಹಾಕಿದ್ದನು, ಈ ವೇಳೆ ದೂರವಾಣಿ ಸಂಖ್ಯೆ ಕೇಳಿದಾಗ ನಿರಾಕರಿಸಿದ್ದಕ್ಕೆ ಅವಳ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾಗಿ ದೂರು ದಾಖಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕಲಂ: 354(ಬಿ),506 ಐಪಿಸಿ, ಕಲಂ:12 ಪೋಕ್ಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!