Sunday, July 26, 2026
spot_imgspot_img
spot_imgspot_img

*ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ‌ ಮಳೆಯಾಗುವ ಸಾಧ್ಯತೆ ಅಂತಾ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ*

- Advertisement -
- Advertisement -

ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ‌ ಮಳೆಯಾಗುವ ಸಾಧ್ಯತೆ ಅಂತಾ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆ & ದಕ್ಷಿಣ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 23ರವರೆಗೆ ವ್ಯಾಪಾಕ‌ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು‌ ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಜಂಟಿ ನಿರ್ದೇಶಕ ಸಿ.ಎಸ್‌.ಪಾಟೀಲ್ ಮಾಹಿತಿ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿತ್ರದುರ್ಗ, ಹಾಸನ ಈ‌ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಎಲ್ಲಾ ಜಿಲ್ಲೆಗಳಲ್ಲಿ 20 ಸೆ.ಮೀ ಮೇಲ್ಪಟ್ಟ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿದೆ.

- Advertisement -

Related news

error: Content is protected !!