Monday, August 10, 2026
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ; ಬೈಕ್ ಸವಾರ ಮೃತ್ಯು

- Advertisement -
- Advertisement -
vtv vitla

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲ ಬಳಿ ಸೋಮವಾರ ಸಂಭವಿಸಿದೆ.

ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ, ಎಲೆಕ್ಟ್ರಿಷಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಕೊರಗಪ್ಪ ಗೌಡ (58) ಮೃತಪಟ್ಟವರು. ಬೆಳಗ್ಗೆ 11:30ರ ಸುಮಾರಿಗೆ ಹಳೆಗೇಟು- ಮರ್ದಾಳ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕಡಬ ಕಡೆಯಿಂದ ಕೃಷ್ಣಪ್ಪ ನಾಯ್ಕ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೊಲೆರೋ ಓಡ್ಲ ಎಂಬಲ್ಲಿ ಸ್ಕಿಡ್ ಆಗಿ ಪಲ್ಟಿ ಹೊಡೆದಿದೆ.

ಈ ಸಂದರ್ಭ ಉಪ್ಪಿನಂಗಡಿ ಕಡೆಯಿಂದ ಕೆಮ್ಮಾರ ಕಡೆ ಕೊರಗಪ್ಪ ಗೌಡರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್‌ನ ಮೇಲೆ ಬೊಲೆರೋ ವಾಹನ ಬಿದ್ದಿದೆ. ಆಗ ಬೈಕ್ ಮತ್ತು ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅಲ್ಲಿ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!