Monday, August 10, 2026
spot_imgspot_img
spot_imgspot_img

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಕೊರೊನಾ ಸೋಂಕು ಪತ್ತೆ

- Advertisement -
- Advertisement -

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಗೆ, “ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು,ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

 ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್​ನಲ್ಲಿ ಇರಬೇಕು” ಎಂಬುದಾಗಿ ಅವರು ಕೋರಿಕೊಂಡಿದ್ದಾರೆ.

ತಮ್ಮೆಲ್ಲರ ಹಾರೈಕೆಯಿಂದ ಕರೊನಾ ವೈರಾಣುವಿನಿಂದ ಶೀಘ್ರವಾಗಿ ಗುಣಮುಖವಾಗಿ ಎಂದಿನಂತೆ ಕಾರ್ಯಪ್ರವೃತ್ತನಾಗುತ್ತೇನೆ ಎಂದೂ ಅವರು ಹೇಳಿದ್ದಾರೆ. ಈಗಾಗಲೇ ಡಿಸಿಎಂ ಡಾ.ಸಿ.ಎನ್​. ಅಶ್ವತ್ಥನಾರಾಯಣ ಅವರಿಗೂ ಸೋಂಕು ದೃಢಪಟ್ಟಿದ್ದು, ಅವರು ಕ್ವಾರಂಟೈನ್​ನಲ್ಲಿದ್ದಾರೆ.

- Advertisement -

Related news

error: Content is protected !!