Thursday, August 27, 2026
spot_imgspot_img
spot_imgspot_img

ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು; ಮನನೊಂದು ತಾಯಿ ಮಗ ಆತ್ಮಹತ್ಯೆ

- Advertisement -
- Advertisement -

ಕೇರಳ : ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತರ ಸಮೀಪಲ್ಲಿ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇದರಿಂದ ತಾಯಿ ತೀವ್ರವಾಗಿ ನೊಂದಿದ್ದರು. ಇದೇ ಬೇಜಾರಲ್ಲಿದ್ದ ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವಾಗಲೇ ಲಿಜಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮನೆಯವರೆಲ್ಲರೂ ಚರ್ಚ್‍ಗೆ ತೆರಳಿದ ಬಳಿಕ ಲಿಜಾ ಬಾವಿಗೆ ಹಾರಿದ್ದಾರೆ. ಇತ್ತ ಪ್ರಾರ್ಥನೆ ಮುಗಿಸಿ ಬರುತ್ತಿದ್ದಂತೆಯೇ ಮನೆಯಲ್ಲಿ ಲಿಜಾ ಹಾಗೂ ಆಕೆಯ ಮಗ ಇಲ್ಲದಿರುವುದನ್ನು ಗಮನಿಸಿದ ಕುಟುಂಬಸ್ಥರಿಗೆ ಶಾಕ್ ಆಗಿದೆ. ಕೂಡಲೇ ಎಲ್ಲರೂ ಎಲ್ಲಾ ಕಡೆ ಹುಡುಕಾಟ ನಡೆಸಿದರು. ಈ ವೇಳೆ ಲಿಜಾ ಹಾಗೂ ಆಕೆಯ ಮಗನ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಬಾವಿಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

- Advertisement -

Related news

error: Content is protected !!