- Advertisement -
- Advertisement -
ಬೆಂಗಳೂರು : ಟಿಪ್ಪರ್ ಹರಿದು ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಬಳಿ ನಡೆದಿದೆ.
ನರಸೀಪುರ ಗ್ರಾಮದ ಹೇಮಾವತಿ (27) ಮೃತ ಯುವತಿ. ಈಕೆ ದ್ವಿಚಕ್ರ ವಾಹನದಲ್ಲಿ ತರಕಾರಿ ತೆಗೆದುಕೊಂದು ಮನೆಗೆ ತೆರಳುವಾಗ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಕೆಳಗೆ ಬಿದ್ದಾಗ ಲಾರಿ ಹರಿದಿದೆ. ಇದರಿಂದ ಗಂಭೀರ ಗಾಯಗಳಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕನನ್ನು ಡಾಬಸ್ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -