- Advertisement -
- Advertisement -
ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ದರ ವಸೂಲಿ ಮಾಡಿದ ಹಿನ್ನೆಲೆ 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಪೊಲೀಸರು ಪ್ರಯಾಣಿಕರ ಸೋಗಿನಲ್ಲಿ ಆಟೋರಿಕ್ಷಾದಲ್ಲಿ ಸಂಚರಿಸಿ ಪರಿಶೀಲಿಸಿದಾಗ ಅಧಿಕ ಬಾಡಿಗೆ ದರ ವಸೂಲಿ ಮಾಡುತ್ತಿರುವುದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
- Advertisement -