Wednesday, May 15, 2024
spot_imgspot_img
spot_imgspot_img

ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ನಾಪತ್ತೆ!

- Advertisement -G L Acharya panikkar
- Advertisement -

ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ನಿಗೂಢವಾಗಿ ನಾಪತ್ತೆ ಆಗಿರುವಂತಹ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.

ವಿಜಯನಗರದ ಸುಖೇಶ್, ನಿವೇದಿತಾ ದಂಪತಿ ಪುತ್ರ ಪರಿನವ್​ ನಾಪತ್ತೆ ಆದ ಬಾಲಕ. ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪರಿನವ್, ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದಾನೆ. ವೈಟ್​ಫೀಲ್ಡ್​ನ ಅಲೆನ್ ಟೂಷನ್ ಸೆಂಟರ್​ಗೆ ತಂದೆ ಡ್ರಾಪ್ ಮಾಡಿದ್ದಾರೆ. ಮಧ್ಯಾಹ್ನ ಕರೆತರಲು ಹೋಗುವುದು ತಡವಾಗಿದ್ದರಿಂದ ನಾಪತ್ತೆ ಆಗಿದ್ದಾನೆ. ಟ್ಯೂಷನ್ ಸೆಂಟರ್​ನಿಂದ ಮಾರತ್ತಹಳ್ಳಿವರೆಗೆ ಬಾಲಕ ನಡೆದುಬಂದಿದ್ದು, ನಂತರ ಬಿಎಂಟಿಸಿ ಬಸ್ ಹತ್ತಿರುವ ಸಿಸಿಕ್ಯಾಮರಾ ದೃಶ್ಯ ಲಭ್ಯವಾಗಿದೆ.

ಆನಂತರ ಬಾಲಕ ಪರಿನವ್ ಎಲ್ಲಿ ಹೋದನೆಂದು ಈವರೆಗೂ ಪತ್ತೆಯಾಗಿಲ್ಲ. ಬಾಲಕ ನಾಪತ್ತೆ ಬಗ್ಗೆ ವೈಟ್​ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ನಾಪತ್ತೆಯಾದ ಪರಿನವ್​ಗಾಗಿ ವೈಟ್​ಫೀಲ್ಡ್ ಠಾಣೆ ಪೊಲೀಸರು ಶೋಧ ಆರಂಭಿಸಿದ್ದಾರೆ.

- Advertisement -

Related news

error: Content is protected !!