Wednesday, May 8, 2024
spot_imgspot_img
spot_imgspot_img

ಹೊಟ್ಟೆ ನೋವು ತಾಳಲಾರದೆ 17 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ..!

- Advertisement -G L Acharya panikkar
- Advertisement -

17 ವರ್ಷದ ಬಾಲಕಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಹದೇವು ಎಂಬುವವರ ಪುತ್ರಿ ರೇಣುಕಾ(17) ಮೃತಪಟ್ಟವಳು.

ಈಕೆಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಶುಕ್ರವಾರ ಆಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಳೆ. ಆಕೆಯ ಆತ್ಮಹತ್ಯೆ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!