Thursday, June 4, 2026
spot_imgspot_img
spot_imgspot_img

ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ

- Advertisement -
- Advertisement -

ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ಹರ್ಯಾಣದ ಫರೀದಾಬಾದ್​ನಲ್ಲಿ ನಡೆದಿದೆ.

ಅತ್ಯಾಚಾರ ಯತ್ನ ವಿಫಲವಾದ ನಂತರ ಮಗುವನ್ನು ಕೊಂದಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಗು ನಾಪತ್ತೆಯಾಗಿದ್ದಳು ಎಂದು ಹುಡುಕಾಟದ ವೇಳೆ ಪಕ್ಕದ ಮನೆಯ ಬಾತ್ ರೂಂನಲ್ಲಿ ಆಕೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮನೆಯು ಆರೋಪಿಗೆ ಸೇರಿದ್ದಾಗಿದೆ.

ಮಾಹಿತಿ ಪಡೆದ ಪೊಲೀಸರು ಆರೋಪಿಯ ಮನೆಗೆ ತಲುಪಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿ ಮಾಳಿಗೆಯಿಂದ ಜಿಗಿದಿದ್ದಾನೆ. ನಂತರ ಆತನನ್ನು ಹಿಡಿದು ಬಂಧಿಸಲಾಯಿತು. ಬಾಲಕಿಯನ್ನು ಹರಿತವಾದ ಆಯುಧ ಬಳಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಆರೋಪಿ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಲಾಗಿದೆ.ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ ಮಗುವಿನ ದೇಹವನ್ನು ಕುಟುಂಬಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನನ್ನು ಪೊಲೀಸರು ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

- Advertisement -

Related news

error: Content is protected !!