Sunday, May 5, 2024
spot_imgspot_img
spot_imgspot_img

ಯುವತಿಯ ಮನೆಗೆ ನುಗ್ಗಿ ಬರ್ಬರ ಹತ್ಯೆ ; ನಂಬರ್ ಪ್ಲೇಟ್ ಇಲ್ಲದ ಬೈಕ್ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು..!

- Advertisement -G L Acharya panikkar
- Advertisement -
vtv vitla

ಏಕಾಏಕಿ ದುಷ್ಕರ್ಮಿಗಳ ಗುಂಪೊಂದು ಯುವತಿ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರೋ ಭೀಕರ ಘಟನೆ ಜೈತ್‌ಪುರ ಪ್ರದೇಶದಲ್ಲಿ ನಡೆದಿದೆ. ಪೂಜಾ ಯಾದವ್ (24) ಮೃತ ಯುವತಿ.

ತಡರಾತ್ರಿ 9 ಗಂಟೆ ಸುಮಾರಿಗೆ, ಇಬ್ಬರು ಅಪರಿಚಿತರು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಪೂಜಾ ಯಾದವ್ ಮನೆಗೆ ದಿಢೀರ್​​ ನುಗ್ಗಿದ್ದಾರೆ. ಬಳಿಕ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಂತರ ಆಕೆಯ ತಲೆಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಗುಂಡಿನ ಸದ್ದು ಕೇಳಿ ಸ್ಥಳೀಯರು ದೌಡಾಯಿಸಿ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿ ದಾರಿ ಮಧ್ಯೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಅಲ್ಲೇ ಇದ್ದ ಸ್ಥಳೀಯರು ಆರೋಪಿಗಳ ಬೆನ್ನಟ್ಟಿದ್ದಾರೆ. ಆದರೆ ಅಷ್ಟರಲ್ಲಿ ತಮ್ಮ ಬೈಕ್​​​ ಅನ್ನು ಅಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಕೊಲೆಗಾರರು ಆ ಬೈಕ್‌ಗೆ ನಂಬರ್ ಪ್ಲೇಟ್‌ ಅನ್ನೇ ಹಾಕಿಲ್ಲ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆ ಬೈಕ್​ ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!