Saturday, June 28, 2025
spot_imgspot_img
spot_imgspot_img

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ

- Advertisement -
- Advertisement -

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಸಂಭವಿಸಿದೆ.

ಗಾಯಾಳು ಪಾದಚಾರಿಯನ್ನು ಧರ್ಣಪ್ಪ (75) ಹಾಗೂ ಬೈಕ್ ಸವಾರನನ್ನು ಮೋಕ್ಷಿತ್ ಎಂದು ಗುರುತಿಸಲಾಗಿದೆ.

ಧರ್ಣಪ್ಪ ಅವರು ಮೊಗರ್ನಾಡು ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮೋಕ್ಷಿತ್ ಅವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಬೈಕ್ ಸವಾರ ಕೂಡಾ ಗಾಯಗೊಂಡಿದ್ದಾರೆ. ಧರ್ಣಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದೆ. ಬೈಕ್ ಸವಾರ ಮೋಕ್ಷಿತ್ ಅವರು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!