Sunday, June 7, 2026
spot_imgspot_img
spot_imgspot_img

ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

- Advertisement -
- Advertisement -

ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್ ಸಮೀಪ ನಡೆದಿದೆ.

ಮೃತಪಟ್ಟ ಯುವಕನನ್ನು ಮಂಜುನಾಥ ಭೋವಿ (26) ಹಾಗೂ ಗಾಯಗೊಂಡವರನ್ನು ಬಾಬು ಎಂದು ಗುರುತಿಸಲಾಗಿದೆ.

ಮಂಜುನಾಥ ಮತ್ತು ಬಾಬು ಮಸ್ಕಿಯ ಭ್ರಮರಾಂಭ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿಕೊಂಡು ಸ್ವ ಗ್ರಾಮ ಲಿಂಗಸುಗೂರು ತಾಲೂಕಿನ ಹೊನ್ನಾಳಿಗೆ ತೆರಳುತ್ತಿದ್ದರು. ಮಾರ್ಗ ಮದ್ಯ ಟೈಯರ್ ಪಂಕ್ಚರ್ ಆಗಿ ನಿಂತಿದ್ದ ಟಿಪ್ಪರ್ ಕಾಣದೇ ಬೈಕ್ ಸವಾರ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಾಯಗೊಂಡಿದ್ದು ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!