Sunday, May 5, 2024
spot_imgspot_img
spot_imgspot_img

ಅಪರಿಚಿತ ವಾಹನ ಡಿಕ್ಕಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್​ ಸವಾರ

- Advertisement -G L Acharya panikkar
- Advertisement -

ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್​ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು, ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್​ನಲ್ಲಿ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ಪ್ರಸಾದ್ ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ಪ್ರಸಾದ್ ಫ್ಲೈ ಓವರ್ ಮೇಲಿಂದ ಕೆಳಕ್ಕೆ ಬಿದ್ದಿದ್ದಾನೆ. ಪ್ರಸಾದ್‌ ಚಲಾಯಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಜಾಲಹಳ್ಳಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!