Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಓವ‌ರ್ ಟೇಕ್ ಭರದಲ್ಲಿ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್‌ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg
This image has an empty alt attribute; its file name is shri-energy-solar-667x1024.jpeg

ಬಂಟ್ವಾಳ: ಬೈಕಿನಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್‌ ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್ (20) ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೈಕ್‌ ಸವಾರ ಉತ್ತರ ಪ್ರದೇಶ ಮೂಲದ ಸೋನು (19) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಹಸವಾರ ಪ್ರಸಾದ್ ಪೂಜಾರಿ ಕಾರ್ಕಳ ಅವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಗಿಸಲಾಗಿದ್ದು ತುರ್ತು ಚಿಕಿತ್ಸಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!