- Advertisement -
- Advertisement -




ಬೆಂಗಳೂರು: ಯುವಕನೋರ್ವ ಸಾಲ ಮಾಡಿ ತೆಗೆದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ದಿನ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ.
ಯುವಕ ಚಂದು ಎಂಬವರು ಬಹುದಿನಗಳ ನಂತರ ತನ್ನ ಕನಸಿನ ಬೈಕ್ ತೆಗೆದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಬೈಕ್ ಕದ್ದು ಕಳ್ಳರ ಗ್ಯಾಂಗ್ ಪರಾರಿಯಾಗಿದೆ. ಮನೆಯ ಮುಂದೆ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಅನ್ನು ಬೈಕಿನಲ್ಲಿ ಬಂದು ಕ್ಷಣಾರ್ಧದಲ್ಲಿ ಕಳ್ಳರು ಕದ್ದೊಯ್ದಿದ್ದಾರೆ.
ಕಳ್ಳರು ಬೈಕ್ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತನ್ನ ಕನಸಿನ ಬೈಕ್ ಕಳ್ಳತನದಿಂದ ಬೈಕ್ ಸವಾರ ಚಂದು ಕಂಗಾಲಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








